Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಸಂಗೀತ ಕ್ಷೇತ್ರದಲ್ಲಿ ಎ.ಎಸ್ ಸದಾಶಿವಪ್ಪ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಲ್ಲಮ್ಮ ಸೂಲಗಿತ್ತಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಸಂಗೀತ ಕ್ಷೇತ್ರದಲ್ಲಿ ಎ.ಎಸ್ ಸದಾಶಿವಪ್ಪ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಲ್ಲಮ್ಮ ಸೂಲಗಿತ್ತಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಯಚೂರಿನ ಎ.ಎಸ್ ಸದಾಶಿವಪ್ಪ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಲ್ಲಮ್ಮ ಸೂಲಗಿತ್ತಿ ಸೇರಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 69 ಜನ ಸಾಧಿಕರಿಗೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಣೆ ಮಾಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಪ್ರಕಟಿಸಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಯ ಚೂರಿನ ಎ.ಎಸ್ ಸದಾಶಿವಪ್ಪ, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಲ್ಲಮ್ಮ ಸೂಲಗಿತ್ತಿ ಹಾಗೂ
ಟಿಬಿ ಡ್ಯಾಂ ದುರಸ್ತಿ ಮಾಡಿಸಿದ್ದ ಕನ್ನಯ್ಯ ನಾಯ್ಡು ಅವರಿಗೆ, ನಟಿ ಹೇಮಾ ಚೌಧರಿ, ಅರುಣ್ ಯೋಗಿರಾಜ್,  ಸೇರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಿ ಕೊಳ್ಳಲಾಗಿದೆ. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.  ಬಯಲಾಟ ಕ್ಷೇತ್ರದಲ್ಲಿ 92 ವರ್ಷದ  ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ. ಇವರ ಹೆಸರನ್ನು ಸಹ ಪರಿಗಣಿಸಲಾಗಿದೆ. ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ಶ್ರೀ ನರಸಿಂಹಲು, ಬೀದರ್ ಜಿಲ್ಲೆ ಇವರನ್ನು ಸಹ ಪರಿಗಣಿಸಲಾಗಿದೆ.  ಇದರಲ್ಲಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

Megha News