Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಪಂಚಮಸಾಲಿ ಸಮಾಜಕ್ಜೆ ೨ಎ ಮೀಸಲು: ಸದನದ ಮುಂದೆ ಸುಪ್ರಿಂಕೋರ್ಟ ಆದೇಶ ಮಂಡನೆ- ಸಿದ್ದರಾಮಯ್ಯ

ಪಂಚಮಸಾಲಿ ಸಮಾಜಕ್ಜೆ ೨ಎ ಮೀಸಲು: ಸದನದ ಮುಂದೆ ಸುಪ್ರಿಂಕೋರ್ಟ ಆದೇಶ ಮಂಡನೆ- ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ ಡಿ.9 -ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವAತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊAಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸ್ಪಷ್ಟಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಬುಧÀವಾರ ಸದನದ ಮುಂದೆ ಮಂಡಿಸುವAತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.

Megha News