ರಾಯಚೂರು.ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜಿಲ್ಲೆಯ ನ್ಯಾಯಾಲಯಗಳಲ್ಲಿ ಡಿ.14ರಂದು ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್ 52,429 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 33,229 ಬಾಕಿ ಇರುವ ಪ್ರಕರಣಗಳಲ್ಲಿ 9,181 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಗುರುತಿಸಲಾಗಿದ್ದು, ಅವುಗಳಲ್ಲಿ 8,707 ಪ್ರಕರಣಗಳು ರಾಜಿಯಾಗಿವೆ. ಅದೇ ರೀತಿ 44,863 ಪೂರ್ವ ದಾವೆ ಪ್ರಕರಣಗಳನ್ನು ರಾಷ್ಟಿçÃಯ ಲೋಕ ಅದಾಲತನಲ್ಲಿ ರಾಜಿ ಸಂಧಾನಕ್ಕಾಗಿ ಗುರುತಿಸಲಾಗಿದ್ದು, ಅವುಗಳ ಪೈಕಿ 43,722 ಪ್ರಕರಣಗಳು ರಾಜಿ ಆಗಿವೆ. ಒಟ್ಟಾರೆಯಾಗಿ 52,429 ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತನಲ್ಲಿ ಇತ್ಯರ್ಥಪಡಿಸಲಾಗಿದೆ.
228 ಸಿವಿಲ್ ಪ್ರಕರಣಗಳು, 100 ಎನ್.ಐ ಆಕ್ಟ್ ಪ್ರಕರಣಗಳು, 25 ಕೌಟುಂಬಿಕ ಪ್ರಕರಣಗಳು, 26 ರಸ್ತೆ ಅಪಘಾತದ ಪರಿಹಾರ ಪ್ರಕರಣಗಳು ಮತ್ತು 82 ರಾಜಿ ಮಾಡಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ 2650 ಜನನ ಪ್ರಮಾಣ ಪತ್ರ ಕೋರಿ ಸಲ್ಲಿಸಿದ ಅರ್ಜಿಗಳು ಹಾಗೂ 04 ಕೌಟುಂಬಿಕ ವಿವಾದಗಳನ್ನು ಗಂಡ ಮತ್ತು ಹೆಂಡತಿಯನ್ನು ಒಂದುಗೂಡಿಸುವ ಮೂಲಕ ಕೌಟುಂಬಿಕ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.