ರಾಯಚೂರು: ರಾಯಚೂರು ವಿಮಾನ ನಿಲ್ದಾಣದ ಹಾಗೂ ವಿವಿಧ ಕೈಗಾರಿಕಾ ಸಂಬಂಧಿತ ಸಮಸ್ಯೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಜೈಗಾರಿಕೆಗಳು ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಅಧ್ಯಕ್ಷೆತೆಯಲ್ಲಿ ಗುರುವಾರ ಸಭೆ ನಡೆಸಲಾಯಿತು.
ಸಭೆಯಲ್ಲಿ ವಿಮಾನ ನಿಲ್ದಾಣ ಪ್ರಗತಿ, ಹೊಸ ಕೈಗಾರಿಕೆಗಳಿಗೆ ಭೂ ಲಭ್ಯತೆ ಮತ್ತು ರಾಯಚೂರು ಜಿಲ್ಲೆಯ ವಿವಿಧ ಕೈಗಾರಿಕಾ ಸಂಬಂಧಿತ ಸಮಸ್ಯೆಗಳಕುರಿತು ಚರ್ಚಿಸಲಾಯಿತು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಙ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಜಿಲ್ಲಾಧಿಕಾರಿ ನಿತೇಶ.ಕೆ, ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಅಧ್ಯಕ್ಷ ಎಸ್.ಕಮಲ್‌ಕುಮಾರ್ ಜೈನ್, ಜಂಟಿ ಕಾರ್ಯದರ್ಶಿ ಲಕ್ಷ್ಮಿ ರೆಡ್ಡಿ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ್ ಯಂಕಂಚಿ, ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಇದ್ದರು.
ವಿಮಾನ ನಿಲ್ದಾಣದ ಅಭಿವೃದ್ಧಿ, ಹೊಸ ಕೈಗಾರಿಕೆಗಳಿಗೆ ಭೂಸ್ವಾಧೀನ ಮತ್ತು ಕೈಗಾರಿಕಾ ವಿನ್ಯಾಸದಲ್ಲಿ ವಸತಿಗಳ ಆನ್‌ಲೈನ್ ಮಾರಾಟ ಸೇರಿದಂತೆ ಇತರೆ ಸೌಲಭ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.