ರಾಯಚೂರ.ರೈಲ್ವೆ ಮೂಲಕ ತೆಲಂಗಾಣದಿಂದ ರಾಯಚೂರಿಗೆ ಅಕ್ರಮವಾಗಿ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಸಾಗಾಣೆ ಮಾಡುತ್ತಿದ್ದು ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ತಂಡ ಆರ್ಪಿಎಫ್ ಅಧಿಕಾರಿಗಳೊಂದಿಗೆ ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂದಿಸಿದ್ದಾರೆ.
ಕ್ಲೋರಲ್ ಹೈಡೇಡ್ ವಿಷಪೂರಿತ ರಾಸಾಯನಿಕ ಮಿಶ್ರಣ ಮಾಡಿ ಕಲಬೆರಿಕೆ ಸೇಂಧಿಯನ್ನು ಮಾರಾ ಟಕ್ಕೆ ತಯಾರಿಸಿಕೊಂಡಿ ತೆಲಂಗಾಣ ರಾಜ್ಯದ ಕೃಷ್ಣ ಗ್ರಾಮದ ರೈಲ್ವೆ ನಿಲ್ದಾಣ ಮೂಲಕ ಆಗಮಿಸಿ ರಾಯಚೂರು ರೈಲ್ವೆ ನಿಲ್ದಾಣದಿಂದ ನಗರದ ವಿವಿಧ ಬಡಾವಣೆಯಲ್ಲಿ ಮಾರಾಟ ಮಾಡುತ್ತಿದೆ, ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿದಾಗ ಸುಮಾರು 250ಕ್ಕೂ ಅಧಿಕ ಲೀಟರ್ ಮೌಲ್ಯದ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ.
ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಅಬಕಾರಿ ಕಾಯ್ದೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಬಕಾರಿ ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು, ಉಪ ನಿರೀಕ್ಷಕರು, ರಾಯಚೂರು ವಿಭಾಗ ಹಾಗೂ ವಲಯ ವಿಭಾಗದ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.