Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Feature ArticleLocal News

ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಜುಬೇನ್ ಮೋಹಪಾತ್ರ ಅಧಿಕಾರ ಸ್ವೀಕಾರ: ಪಾಲಿಕೆ ಕಚೇರಿ ವೀಕ್ಷಣೆ

ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಜುಬೇನ್ ಮೋಹಪಾತ್ರ ಅಧಿಕಾರ ಸ್ವೀಕಾರ: ಪಾಲಿಕೆ ಕಚೇರಿ ವೀಕ್ಷಣೆ

ರಾಯಚೂರು: ನಗರಸಭೆಯಿಂದ ಮಹಾನಗರ ಪಾಲಿಕೆಗೆ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆ ಕಚೇರಿಯಾಗಿ ಹಳೆ ಜಿಲ್ಲಾಧಿಕಾರಿ ಕಚೇರಿಯನ್ನು ಹಸ್ತಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಜುಬೇನ್ ಮೋಹಪಾತ್ರ ಅವರು ಇಂದು ಅಧಿಕಾರ ಸ್ವೀಕರಿಸಿ, ಹಳೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಈಗ ನೂತನ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಗೊಂಡಿದೆ. ಹೀಗಾಗಿ ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಮಹಾನಗರ ಪಾಲಿಕೆ ಕಚೇರಿಯಾಗಿ ಪರಿವರ್ತಿಸಲಾಗಿದೆ. ಈ ಸಂದರ್ಭದಲ್ಲಿ ಆಯುಕ್ತರು ಕಟ್ಟಡದ ಸೌಲಭ್ಯಗಳನ್ನು ವೀಕ್ಷಿಸಿ, ಸ್ಥಳಾಂತರ ಪ್ರಕ್ರಿಯೆ ಸರಾಗವಾಗಿ ಮುಗಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಜಾನನ ಬಾಲೆ, ಪಾಲಿಕೆಯ ಉಪ ಆಯುಕ್ತ ಗುರುಸಿದ್ದಯ್ಯ ಹಿರೆಮಠ, ವಲಯ ಆಯುಕ್ತ ಮಹೆಬೂಬ್ ಜಿಲಾನಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Megha News