ದಾವಣೆಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾಜುನ ಪ್ರಶ್ನೆಗೆ ಆರೋಗ್ಯ ಸಚಿವರ ಉತ್ತರ
ರಾಯಚೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರದ ರಾಜ್ಯ ಆರೋಗ್ಯ ಸಚಿರುವ ಲಿಖಿತ ಉತ್ತರ ನೀಡುವ ಮೂಲಕ ಮತ್ತೊಮ್ಮೆ ನಿರಾಶೆ ಮೂಡಿಸಿದೆ.
ದಾವಣೆಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕೇಳಿದ ಪ್ರಶ್ನೆಗೆ ರಾಜ್ಯ ಆರೋಗ್ಯ ಸಚಿವ ಪ್ರತಾಪರಾವ್ ಜಾಧವ ನೀಡಿದ ಉತ್ತರದಲ್ಲಿ ಏಮ್ಸ್ ಸ್ಥಾಪಿಸುವ ಪ್ರಸ್ತಾವನೆಯೇ ಇನ್ನು ತಲುಪಿಲ್ಲವೇ ಎನ್ನುವ ಅನುಮಾನಕ್ಕೆ ಕಾರಣವಾಗಿದೆ.
ಪ್ರಧಾನಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆಯಡಿ ದೇಶದಲ್ಲಿ 22 ಏಮ್ಸ್ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಆರೋಗ್ಯ ಸೌಲಬ್ಯಗಳ ಕೊರತೆ ನೀಗಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆಯಡಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಸರ್ಕಾರದ ಮುಂದಿಲ್ಲ ಎಂದು ಲಿಖಿತ ಉತ್ತರ ನೀಡಿದ್ದಾರೆ.
ಸುಳ್ಳಾದಪತ್ರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದರು. ಅದರೀಗ ಪ್ರಸ್ತಾವನೆಯೇ ಇಲ್ಲ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ಬೇಡಿಕೆಯನ್ನು ಗಂಬೀರವಾಗಿ ಪರಿಗಣಿಸಿಲ್ಲ ಎಂಬದು ಬಹಿರಂಗಗೊಂಡಂತಾಗಿದೆ.
ರಾಜ್ಯ ಮುಖ್ಯಮಂತ್ರಿ ಎರಡು ಬಾರಿ ಕೇಂದ್ರಕ್ಕೆ ಪತ್ರ ಬರೆದು ಎಮ್ಸ್ ಮಂಜೂರಾತಿ ಅವಶ್ಯಕತೆಯನ್ನು ತಿಳಿಸಿದ್ದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಸಹ ದೆಹೆಲಿಗೆ ಹೋಗಿ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ನೀಡಿದ್ದರು. ಆದರೂ ಕೇಂದ್ರ ಸರ್ಕಾರ ರಾಜ್ಯದ ಬೇಡಿಕೆಯನ್ನು ಮನ್ನಿಸಿಲ್ಲ. ಅಲ್ಲದೇ ಲೋಕಸಭಾ ಅಧಿವೇಶನದಲ್ಲಿ ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ ಸಹ ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವ ಅವಶ್ಯಕತೆಯನ್ನ ಸಂಸತ್ನಲ್ಲಿ ಪ್ರಸ್ತಾಪಿಸಿದ್ದರು. ಅಲ್ಲದೇ 1058 ದಿನಗಳಿಂದ ಏಮ್ಸ್ ಮಂಜೂರಾತಿಗೆ ಹೋರಾಟ ಮುಂದುವರೆದಿದೆ. ಹೋರಾಟ ಸಮಿತಿ ನಿಯೋಗ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರನ್ನು ಭೇಟಿ ಮಾಡಿ ಏಮ್ಸ್ ಸ್ಥಾಪಿಸುವ ಅಗತ್ಯತೆಯನ್ನು ಮನವರಿಕೆ ಮಾಡಿ ಬಂದಿದ್ದಾರೆ.
ಆದರೆ ಕೇಂದ್ರ ಸರ್ಕಾರ ಮಾತ್ರ ಏಮ್ಸ್ ಮಂಜೂರಾತಿ ವಿಷಯದಲ್ಲಿ ರಾಜ್ಯದ ಬೇಡಿಕೆಯನ್ನು ಪರಿಗಣಿಸದೇ ಇರುವದು ಕಳವಳಕಾರಿ. ರಾಜ್ಯದಿಂದ ಏಮ್ಸ್ ಮಂಜೂರಾತಿ ನೀಡುವ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂಬದು ಗೊಂದಲಗೂಡಾಗಿದೆ. ರಾಜ್ಯದಿಂದ ಪ್ರಸ್ತಾವನೆಯೇ ಹೋಗಿಲ್ಲವೋ, ಸಿಎಂ ಬರೆದ ಪತ್ರಕ್ಕೆ ಬೆಲೆಯೇ ಇಲ್ಲವೋ ಎಂಬ ಗೊಂದಲ ಮುಂದುವರೆಯಲು ಕಾರಣವಾಗಿದೆ.