ರಾಯಚೂರು. 6 ವರ್ಷದ ಬಾಲಕನಿಗೆ ಡೆಂಗ್ಯೂ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ.
6 ವರ್ಷದ ಬಾಲಕ ಸಾಕ್ಷಿ ಎಂದು ತಿಳಿದು ಬಂದಿದೆ.
ಬಾಲಕ ಸಾಕ್ಷಿವಿನಲ್ಲಿ ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದಿದ್ದು, ಬಾಲಕ ರಕ್ತದ ಮಾದರಿ ಸಂಗ್ರಹಿಸಿದ್ದು, ಪರೀಕ್ಷೆ ಮಾಡಲಾಗುತ್ತಿದೆ, ಬಾಲಕ ಇದೀಗ ಬೆಂಗಳೂರಿನ ಜೆಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಡೆಂಗ್ಯೂ ದೃಢವಾದ ಹಿನ್ನೆಲೆಯಲ್ಲಿ ಕಣ್ಣೂರು ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯ ಲ್ಲಿ 36 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 1060 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.