Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ‌ರಿಗೆ ಅವಾಶ್ಯ ಶಬ್ದಗಳಿಂದ ನಿಂದಿಸಿದ ಸೂಲೆಬೆಲೆ ಚಕ್ರವರ್ತಿ ವಿರುದ್ಧ ಪ್ರಕರಣ ದಾಖಲು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ‌ರಿಗೆ ಅವಾಶ್ಯ ಶಬ್ದಗಳಿಂದ ನಿಂದಿಸಿದ ಸೂಲೆಬೆಲೆ ಚಕ್ರವರ್ತಿ ವಿರುದ್ಧ ಪ್ರಕರಣ ದಾಖಲು

ರಾಯಚೂರು. ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳ ಪದಗಳನ್ನು ಬಳಸಿ ದ ಘಟನೆ ಸಂಬಂಧಿಸಿದಂತೆ ಸಿರವಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.18 ರಂದು ಸಿರವಾರ ಪಟ್ಟಣದದಲ್ಲಿ ನಮೋ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡ ಕಾರ್ಯ ಕ್ರಮದಲ್ಲಿ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳ ಪದಗಳನ್ನು ಬಳಸಿದಘಟನೆ ಸಂಬಂಧಿಸಿದಂತೆ ಕಲಬುರ್ಗಿಯ ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ ಅವರು ಪ್ರಕರಣ ದಾಖಲಿಸಿದ್ದರು, ಈಗ ಆ ಪ್ರಕರಣ ಸಿರವಾರ ಠಾಣೆ ವರ್ಗಾಯಿಸಿದ್ದಾರೆ. ಸಿರವಾರ ಪೊಲೀಸ್‌ ಠಾಣೆಯಲ್ಲಿ, ಜ. 26 ರಂದು ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು
ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಕ್ರವರ್ತಿ ರ ಸೂಲಿಬೆಲೆ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೆ ಪೊಲೀಸ್ ತಂಡ ರಚಿಸಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.

Megha News