Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ನರೇಗಾ ಕಾಮಗಾರಿಗಳಲ್ಲಿ ಅಕ್ರಮ, ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ನರೇಗಾ ಕಾಮಗಾರಿಗಳಲ್ಲಿ ಅಕ್ರಮ, ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ದೇವದುರ್ಗ. ತಾಲ್ಲೂಕಿನ 33 ಗ್ರಾಮ ಪಂಚಾಯಿ ತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರ ಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋ ಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರು ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿದೆ.

ನರೇಗಾ ಯೋಜನೆಯಡಿ 2020-21, 2021-22 ಹಾಗೂ 2022-23ರವರೆಗೆ ನಡೆದ ಕಾಮಗಾರಿ ಅನುಷ್ಠಾನಗೊಂಡ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ 11.64 ಕೋಟಿ ಮತ್ತು ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ನಿರ್ವಹಿಸದೆ 32.51 ಕೋಟಿಯನ್ನು ಅಕ್ರಮ ವಾಗಿ ಪಾವತಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ 102.32 ಕೋಟಿಯನ್ನು ಶ್ರೀ ಮಾರುತೇಶ್ವರ ಎಂಟರ್‌ಪ್ರೈಸಸ್‌ಗೆ ನಿಯಮ ಮೀರಿ ಪಾವತಿ ಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿ ಸಲಾಗಿದೆ.

5.10 ಕೋಟಿ ರಾಜಧನವನ್ನು ಸಂಬಂಧಿಸಿದ ಲೆಕ್ಕ ಶೀರ್ಷಿಕೆಗೆ ಪಾವತಿಸದೇ ಸರ್ಕಾರಕ್ಕೆ ನಷ್ಟ ಮಾಡಲಾಗಿದೆ. ವೈಯಕ್ತಿಯವಾಗಿ ಕಟ್ಟಿಕೊಂಡ ದನದ ಶೆಡ್‌ಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸದೆ ನಿಯಮ ಬಾಹಿರ ವಾಗಿ ಸಾಮಗ್ರಿ ಪೂರೈಕೆದಾರರಿಗೆ ಹಣ ಪಾವತಿ ಸಲಾಗಿದೆ. ಕಾಮಗಾರಿ ನಡೆದ ಸ್ಥಳಗಳಲ್ಲಿ ನಾಮ ಫಲಕ ಅಳವಡಿಸದೆ ಮತ್ತು ಹೆಚ್ಚುವರಿಯಾಗಿ ನಕಲಿ ಜಾಬ್ ಕಾರ್ಡ್‌ಗಳನ್ನು ಸೃಷ್ಟಿಸಿ 49.27 ಕೋಟಿಯನ್ನು ಸರ್ಕಾರಕ್ಕೆ ನಷ್ಟ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕು ಪಂಚಾಯಿತಿ ಇಒ ಆಗಿದ್ದ ಮೊದಲನೇ ಆರೋಪಿ ಪಂಪಾಪತಿ ಹಿರೇಮಠ, ಎರಡನೇ ಆರೋಪಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕು ಇಒ ಬಸಣ್ಣ ನಾಯಕ ಹೇಮನೂರು ಅವರು ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ.

ಅಂತಿಮ ವರದಿ ಬಂದ ಬಳಿಕ ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ತಾಂತ್ರಿಕ ಸಿಬ್ಬಂದಿ, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಅಕ್ರಮದಲ್ಲಿ ಭಾಗಿಯಾದವರ ಮೇಲೂ ಪ್ರಕರಣ ದಾಖಲಿಸಲಾಗುತ್ತದೆ. ಅವ್ಯವಹಾರದ ಸಂಬಂಧ ಈವರೆಗೆ 60ಕ್ಕೂ ಹೆಚ್ಚು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತೆರಿಗೆ ವಂಚಿಸಿದ್ದ ಶ್ರೀ ಮಾರುತೇಶ್ವರ ಎಂಟರ್‌ಪ್ರೈಸಸ್‌ ಕಚೇರಿ ಮೇಲೆ ಕಳೆದ ಮೇ 12ರಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾ ರಿಗಳು ದಾಳಿ ನಡೆಸಿದ್ದರು.

Megha News