Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

Crime News

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಬಂಗಾಳಿ ಕ್ಯಾಂಪ್‍ನಲ್ಲಿ ಬಿಗುವಿನ ವಾತಾವರಣ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಬಂಗಾಳಿ ಕ್ಯಾಂಪ್‍ನಲ್ಲಿ ಬಿಗುವಿನ ವಾತಾವರಣ

ರಾಯಚೂರು : ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಸಂಬಂಧಿಸಿದಂತೆ ಸಿಂಧನೂರು ತಾಲೂಕಿನ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ ಸ್ಟಾಗ್ರಾಂ ನಲ್ಲಿ ಅನ್ಯಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಹಿಂದೂ ಯುವಕರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಸಿಂಧನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಪ್ರಕರಣ ಸಂಬಂಧ ಅಕ್ಬರ್, ಶಾಮೀದ್, ಸಮೀರ್, ತಾಜುದ್ದೀನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಯುವತಿ ಹೆಸರಿನಲ್ಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಈ ವಿಚಾರಕ್ಕೆ 2 ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ಹಿನ್ನೆಲೆ ಅನ್ಯಕೋಮಿನ ೩0 ಜನರ ವಿರುದ್ಧ ಹಿಂದೂ ಯುವಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹೆಚ್ಚುವರಿ ಎಸ್ಪಿ ಸ್ಥಳದಲ್ಲಿ ಬಿಡಾರ ಹುಡಿದ್ದಾರೆ.ಪರ ವಿರೋಧ ಪ್ರಕರಣ ದಾಖಲಾಗಿದೆ. ಶಾಂತಿ ಕಾಪಾಡುವಂತೆ ಎಸ್ ಪಿ ನಿಖಿಲ್ ಮನವಿ ಮಾಡಿದ್ದಾರೆ.ತನಿಖೆ ನಡೆಸಲಾಗುತ್ತಿದೆ‌

Megha News