ಮಾನವಿ. ಪಟ್ಟಣದ ನಂದಿನಿ ಲೇಔಟ್ನಲ್ಲಿ ಡೆಕೋರೇಷನ್ ಮಳಿಗೆಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಮಳಿಗೆ ಅಮರಶೆಟ್ಟಿ ಎನ್ನುವವರಿಗೆ ಸೇರಿದೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್, ಬೆಂಕಿ ಕಡ್ಡಿಯಿಂದ ಕಿಡಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ಕೆನ್ನಾಲಗೆಗೆ ಅಂಗಡಿಯಲ್ಲಿದ್ದ ಆಲಂಕಾರಿಕ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ, ಇನ್ನು ಮದುವೆ ಪೆಂಡಾಲ್, ಬಟ್ಟೆಗಳಿಗೆ ತಗುಲಿದ್ದು, ಬೆಂಕಿ ಹೊತ್ತಿ ಉರಿದಿದೆ.
ಇದರಿಂದಾಗಿ ಸಂಪೂರ್ಣ ಸುಟ್ಟು ಹೋಗಿವೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿ ಆಗಮಿಸಿ ಬೆಂಕಿ ನಂದಿಸಿದ್ದಾರೆ
ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.