ರಾಯಚೂರು. ತಾಲೂಕಿನ ಚಂದ್ರಬಂಡಾ ಮುಖ್ಯರಸ್ತೆಯ ಕಟ್ಲಾಟಕೂರು ಕ್ರಾಸ್ ಸಮೀಪ ಪೆಟ್ರೋಲ್ ಬಂಕ್ ಹತ್ತಿರ ರಸ್ತೆ ಗುಂಡಿ ಬಿದ್ದಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗಿದೆ ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಗುಂಡಿ ಮುಚ್ಚಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ಗೌಡ ಕಡಗಂದೊಡ್ಡಿ ಒತ್ತಾಯಿಸಿದ್ದಾರೆ.
ಚಂದ್ರಬಂಡ ಹೋಬಳಿಯ ಮುಖ್ಯ ರಸ್ತೆಯು ಕಟ್ಲಟಕೂರು ಗ್ರಾಮದ ಸಮೀಪ ಪೆಟ್ರೋಲ್ ಬಂಕ್ ಹತ್ತಿರ ಮುಖ್ಯ ರಸ್ತೆಯಲ್ಲಿ ಬೃಹದಾಕಾರದ ಬೊಂಗಾ ಬಿದ್ದದೆ, ಕುಡಿಯುವ ನೀರಿನ ಪೈಪ್ ಲೈನ್ ಹಾದು ಹೋಗಿದ್ದರಿಂದ ಕಳಪೆ ಕಾಮಗಾರಿ ಮಾಡಲಾಗಿದೆ.
ಈ ರಸ್ತೆಯಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿ ಗಳು, ಕೆಲಸಕ್ಕೆ ಹೋಗುವ ಜನರಿಗೆ, ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ರಾತ್ರಿ ವೇಳೆಯಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳಿವೆ, ತಕ್ಷಣವೇ ಸರಿಪಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಇಲ್ಲದಿದ್ದರೆ ಹೋರಾಟ ನಡೆಸಲಾಗುತ್ತದೆ ಎಂದ ಎಚ್ಚರಿಸಿದ್ದಾರೆ.