Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಾರಾಷ್ಟ್ರ ಮೂಲದ ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಾರಾಷ್ಟ್ರ ಮೂಲದ ವ್ಯಕ್ತಿ ಸಾವು

ರಾಯಚೂರು. ಚಲಿಸುತ್ತಿರುವ ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಗರ ಹೊರವಲಯದ ಯರಮರಸ್ ರೈಲ್ವೆಯ ಸಮೀಪ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ಮಹಾರಾಷ್ಟ್ರ ಮೂಲದ ಸನೋಜ್ ಕುಮಾರ ಎಂದು ಗುರುತಿಸಲಾಗಿದೆ.
ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎರಡು ಮೂರು ದಿನಗಳ ಹಿಂದೆ ಪಡೆದಿರಬಹುದು ಎಂದು ಹೇಳಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ರೈಲ್ವೆ ಪೋಲಿಸ್ ಠಾಣೆಯ ಪಿಎಸ್ಐ ವೀರಭದ್ರ ಎಚ್ ಎಸ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದರು.
ಸ್ಥಳದಲ್ಲಿ ಮೊಬೈಲ್ ಫೋನ್, ಸಿಮ್ ಕಾರ್ಡ್ ಹಾಗೂ ನೂರು ರೂ ನೋಟುಗಳು ಮತ್ತು ಗುರುತಿನ ಚೀಟಿ ಪತ್ತೆಯಾಗಿದೆ, ಗುರುತಿನ ಚೀಟಿಯಲ್ಲಿ ಮಹಾರಾಷ್ಟ್ರದ ಸನೋಜ್ ಕುಮಾರ ಎಂದು ಹೆಸರು ಇದೆ, ದಾಖಲೆ ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪಿಎಸ್ಐ ವೀರಭದ್ರ ಎಚ್ ಎಸ್ ತಿಳಿಸಿದ್ದಾರೆ.
ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News