ರಾಯಚೂರು,ಡಿ೨-ನಿಂತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ರಾಯಚೂರು ಹೊರವಲಯದ ತೆಲಂಗಾಣ ಗಡಿ ಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ವರದಿಯಾಗಿದೆ.
ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಹನ್ವಾಡ ಮಂಡಲ ತಂಕಾರ ಗ್ರಾಮದ ಸುರೇಶ(48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಾಯಚೂರಿನಿಂದ ಮೆಹಬೂಬ್‌ನಗರಕ್ಕೆ ಹೊರಟಿದ್ದ ತೆಲಂಗಾಣ ಸಾರಿಗೆ ಬಸ್‌ನ ಕಂಡಕ್ಟರ್ ಟಿಕೇಟ್ ಪಡೆಯಲು ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಇದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುರೇಶ ಬಸ್ಸಿನ ಹೊರಗೆ ನಿಂತಿದ್ದ. ರಾಯಚೂರು ಕಡೆಯಿಂದ ವೇಗವಾಗಿ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಂತಿದ್ದ ಸುರೇಶ ಮೇಲಿನಿಂದ ಬಸ್ ಹರಿದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕೃಷ್ಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.