ಬೆಂಗಳೂರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ತಿಪ್ಪೇಸ್ವಾಮಿ ಪ್ರಶ್ನಿಸಿದರು.
ಈ ವೇಳೆ ಏಮ್ಸ್ ಸ್ಥಾಪನೆ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಿಧಾನ ಪರಿಷತ್ ನಲ್ಲಿ ಭಾರೀ ಮಾತಿನ ಚಕಮಕಿ ಉಂಟಾಯಿತು.
ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ರಾಯ ಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ನಾನು, ಸಂಸದರು, ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ಕೇಂದ್ರದ ಆರೋಗ್ಯ ಸಚಿವರನ್ನು ಎರಡು ಬಾರಿ ಭೇಟಿ ಮಾಡಿ, ಮನವಿ ಮಾಡಿದೆ. ಇದಕ್ಕೆ ಸ್ಪಂದನೆಯಿಲ್ಲ.
ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಬೇಕಾಗಿರುವ ಭೂಮಿ, ವಿದ್ಯುತ್, ನೀರು, ವಿಮಾನ ನಿಲ್ದಾಣ, ರಾಷ್ಟ್ರೀ ಯ ಹೆದ್ದಾರಿ ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ರಾಜ್ಯ ಸರ್ಕಾರ ಸಿದ್ದವಿದೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.
ದೇಶದ ಎಲ್ಲಾ ರಾಜ್ಯಗಳಲ್ಲಿ ಏಮ್ಸ್ ಸ್ಥಾಪನೆ ಮಾಡಲು ಅವಕಾಶ ನೀಡಲಾಗಿದೆ, ಆದರೆ ಕರ್ನಾಟಕ ಮತ್ತು ಕೇರಳಕ್ಕೆ ಅವಕಾಶ ಕೊಟ್ಟಿಲ್ಲ. ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯ ಸಿ.ಟಿ.ರವಿ ಅವರು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ. ರಾಜ್ಯಕ್ಕೆ ಐಐಟಿ ಕೊಟ್ಟಿದ್ದು ನರೇಂದ್ರ ಮೋದಿ ಸರ್ಕಾರವ ಲ್ಲವೇ ಎಂದು ಪ್ರಶ್ನಿಸಿದರು.
ಆಡಳಿತ ಪಕ್ಷ ಪ್ರಿಯಾಂಕ ಖರ್ಗೆ ಸೇರಿ ಹಲವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು, ನಾವೇನು ಕೇಂದ್ರಕ್ಕೆ ತೆರಿಗೆ ಕಟ್ಟುವುದಿಲ್ಲವೇ, ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡಲು ನಿಮ್ಮ ಪ್ರಧಾನಿಗೆ ನೀವೆ ಹೇಳಿ ಎಂದರು.