ಸಿಂಧನೂರು. ವಸತಿ ನಿಲಯದ ಸ್ನಾನಗೃಹ ದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಶವಪತ್ತೆಯಾಗಿರುವ ಘಟನೆ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೆಟ್ರಿಕ್ ಪೂರ್ವ, ಪದವಿ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಗುಂಜಹಳ್ಳಿ ಗ್ರಾಮ ನಿವಾಸಿ
ಸಣ್ಣ ಹುಸೇನಪ್ಪ ಎಂದು ತಿಳಿದು ಬಂದಿದೆ.
ಸಿಂಧನೂರಿನ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ, ಹಾಸ್ಟೆಲ್ನಲ್ಲಿ ಸ್ನಾನದ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇ ಶಕಿ ವಿಜಯಾ, ಸಿಂಧನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀ ಕ್ಷೆಗೆ ರವಾನಿಸಲಾಗಿದೆ.
ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.