ರಾಯಚೂರು. 78ನೇ ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಹಮಿಕೊಂಡಿದೆ. ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜಾರೋಹಣ ಮಾಡುವುದು ದೇಶಾಭಿಮಾನದ ಸಂಕೇತ ಹಾಗೂ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್13 ರಿಂದ ಆಗಸ್ಟ್15ರ ತನಕ ಹಮ್ಮಿಕೊಳ್ಳಲಾಗಿದೆ. ಕಳೆದ ಬಾರಿಯೂ ಈ ಮಾದರಿ ಅಭಿಯಾನವನ್ನು ನಡೆಸಲಾಗಿತ್ತು, ಅದು ಯಶಸ್ವಿಯಾಗಿತ್ತು. ಈ ಬಾರಿಯೂ ಅಭಿಯಾನ ಮುಂದುವರಿದಿದೆ ಎಂದರು.
ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೇಶಾಭಿಮಾನವನ್ನು ಮೂಡಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ. ಎಲ್ಲರೂ ಸಮರ್ಥವಾಗಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ರಾಷ್ಟçಧ್ವಜವನ್ನು ಸಂಜೆ ಸೂರ್ಯಾಸ್ತದವರೆಗೆ ನಿರಂತರವಾಗಿ ಹಾರಿಸಬೇಕು ಎಂದರು.
ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕನ್ನಡ ಭಾಷೆಯಲ್ಲಿ ಕರಪತ್ರ, ಸ್ಯಾಂಡೀಸ್, ಬ್ಯಾನರ್ ಇತ್ಯಾದಿಗಳ ಮುಖಾಂತರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಹಲ್‌ಗಳು, ಉದ್ಯಾನವನಗಳು, ಹೋಟೆಲ್‌ಗಳು, ಅಲ್ಲದೇ ಪ್ರತಿ ಗ್ರಾಮಗಳಲ್ಲಿ ಸಾರ್ವಜನಿಕ ಸಂಪರ್ಕ ಹೊಂದಿರುವ ಕಚೇರಿಗಳ ಮುಂದೆ ಪ್ರಚಾರ ಮಾಡಲು ಸೂಕ್ತ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೃಷ್ಣ, ಜಿಲ್ಲಾ ಕೈಗಾರಿಕೆ ಅಧಿಕಾರಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗೂರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಂಗಮೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪಲತಾ, ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.