Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಮುಂದಿನ ಮುಖ್ಯಮಂತ್ರಿ ಎಂದು ಕೊಂಡಾಡಿದ ಶಾಸಕ ಶಿವರಾಜ ಪಾಟೀಲರ ವಿಡಿಯೋ ವೈರಲ್

ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಮುಂದಿನ ಮುಖ್ಯಮಂತ್ರಿ ಎಂದು ಕೊಂಡಾಡಿದ ಶಾಸಕ ಶಿವರಾಜ ಪಾಟೀಲರ ವಿಡಿಯೋ ವೈರಲ್

ರಾಯಚೂರು. ಶಾಸಕ ಹಾಗೂ ಜಿಲ್ಲಾದ್ಯಕ್ಷ ಶಿವರಾಜ ಪಾಟೀಲ್ ಅವರು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಮುಂದಿನ ರಾಜ್ಯದ ಮುಖ್ಯಮಂತ್ರಿ ಎಂದು ಕೊಂಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಯಚೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅದ್ದೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ‌.
ಗಂಜ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿ ಕಾರ್ಯಕರ್ತರ ಸಭೆಯ ಬಹಿರಂಗ ಕಾರ್ಯಕ್ರಮದಲ್ಲಿ ಸ್ವಾಗತಿಸಿ ಶಾಸಕ ಶಿವರಾಜ ಪಾಟೀಲ್ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ರಾಜ್ಯದ ಮುತ್ಸದಿ ರಾಜಕಾರಣಿ, ಅಶೋಕ ಚಕ್ರವರ್ತಿಯಂತೆ ಕಾಲಿಕೆ ಚಕ್ರ ಕಟ್ಟಿಕೊಂಡು ರಾಜ್ಯದಲ್ಲಿ ತಿರುಗಾಡುತ್ತಿದ್ದಾರೆ, ಅವರು ಮುಂದಿನ ರಾಜ್ಯದ ಮುಖ್ಯಮಂತ್ರಿ ಎಂದು ಕೊಂಡಾಡಿದ್ದು, ಸಭೆಯಲ್ಲಿ ನೆರಿದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು,
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದ್ದು ಎಲ್ಲೆಡೆ ಈ ವಿಡಿಯೋ ಹರಿದಾಡುತ್ತಿದೆ.

Megha News