ರಾಯಚೂರು. ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಡಾನ್ಸ್ ಮಾಡುತ್ತಿರುವಾಗ ಮಹಿಳೆಯೊಬ್ಬಳು ಕುಸಿದು ಬಿದ್ದು ಸಾವನಪ್ಪಿದ್ದ ಘಟನೆ ನಡೆದಿದೆ.
ಮೃತ ಮಹಿಳೆ ಅನಂತಮ್ಮ (56) ಎಂದು ತಿಳಿದು ಬಂದಿದೆ.
ನಗರದ ಜಲಾಲ್ ನಗರದಲ್ಲಿ 11ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಕಳೆದ ರಾತ್ರಿ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿಯಾಗಿ ಮಹಿಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.