ರಾಯಚೂರು. ಯುಗಾದಿ ಹಬ್ಬದ ನಿಮಿತ್ತ ಶ್ರೀಶೈಲಕ್ಕೆ ಪಾದಯಾತ್ರೆ ಹೋಗುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಮಾನ್ವಿ ತಾಲೂಕಿನ ಚಿಕ್ಕ ಕೊಟ್ನೆಕಲ್ ಬಳಿ ಘಟನೆ ನಡೆದಿದೆ.
ಮೃತ ಯುವಕನನ್ನು ಶ್ರೀಶೈಲ ದಡುತಿ (22) ಎಂದು ಗುರುತಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮೂಲದವರು ಎಂದು ತಿಳಿದು ಬಂದಿದೆ.
ಪ್ರತಿ ವರ್ಷದಂತೆ ತಮ್ಮ ಸ್ನೇಹಿತರೊಂದಿಗೆ ಶ್ರೀಶೈಲ ಪಾದಯಾತ್ರೆ ಹೊರಟಿದ್ದರು. ಮಾರ್ಗ ಮದ್ಯ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಬಿಸಿಲಿನ ತಾಪಮಾನದಿಂದ ಸುಸ್ತಾಗಿದ್ದು ವಿಶ್ರಾಂತಿ ಪಡೆಯಲು ಕುಳಿತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮಾನವಿ ಪೋಲಿಸ್ ಠಾಣೆಯ ಪೋಲಿಸ್ ಬೇಟಿ ನೀಡಿ ಪರಿಶೀಲನೆ ನಡಿಸಿದರು, ನಂತರ
ಪ್ರಕರಣ ದಾಖಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಿಯ ಆಸ್ಪತ್ರೆ ರವಾನಿಸಿದ್ದಾರೆ.