ರಾಯಚೂರು. ರಾಯಚೂರು ಮೂಲದ ಯುವತಿಯೊಬ್ಬಳು ಬೆಟ್ಟದಲ್ಲಿ ಸೆಲ್ಫಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಬಂಡೆಯಿಂದ ಜಾರಿ ಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.
ಯುವತಿ ರಾಯಚೂರು ಮೂಲದ ಅಶ್ವಿನಿ ಎಂದು ತಿಳಿದು ಬಂದಿದೆ.
ಯುವತಿ ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಸೆಲ್ಪಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದು, ಬೆಟ್ಟದ ಮೇಲಿರುವ ಬಂಡೆಗಲಿನ ಮೇಲಿಂದ 30 ರಿಂದ 40 ಅಡಿ ಕೆಳಗೆ ಬಿದ್ದಿದ್ದು, ಜೋರಾಗಿ ಕಿರುಚಾಡಿ ದ್ದಾಳೆ. ಕೇಳಿದ ಭಕ್ತರು ದೇವಸ್ಥಾನದ ಸಿಬ್ಬಂದಿಗೆ ಮಾಹಿತಿ ನೀಡಿದರು.
ಬೆಟ್ಟದಲ್ಲಿ ಇಳಿದು ಸಿಬ್ಬಂದಿಗಳು ಯುವತಿಯನ್ನು ರಕ್ಷಣೆ ಮಾಡಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಎರಡು ಗಂಟೆ ಕಾರ್ಯಾಚರಣೆ ಬಳಿಕ ಬೆಟ್ಟದಿಂದ ಯುವತಿಯನ್ನು ಹೊರಗೆ ತರಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಡಾ. ರಾಮ್ ಎಲ್ ಅರಸಿದ್ದಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಬೇಟಿ ನೀಡಿ ಮಾಹಿತಿ ಪಡೆದಿದ್ದಾರೆ.