Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಭೇಟಿ, ಪರಿಶೀಲನೆ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಭೇಟಿ, ಪರಿಶೀಲನೆ

ರಾಯಚೂರು,ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಕ್ರೀಡಾ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್ ಅವರು ಗುರವಾರ ದಂದು ಭೇಟಿ, ನೀಡಿ ಪರಿಶೀಲನೆ ಮಾಡಿದರು.

ಈ ವೇಳೆ ಮಾತನಾಡಿ, ನಾಳೆ (ಜೂ.21ರಂದು) ಶಿಷ್ಟಾಚಾರದ ಪ್ರಕಾರ 6.30ಕ್ಕೆ ಏಕಕಾಲದಲ್ಲಿ ಯೋಗಭ್ಯಾಸ ಪ್ರಾರಂಭವಾಗಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಯೋಗಪಟುಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಜಿಲ್ಲಾ ಕ್ರೀಡಾಂಗಣಕ್ಕೆ ನಿಗದಿತ ಸಮಯಕ್ಕೆ ಆಗಮಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್. ಪಾಟೀಲ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಡಾ. ಪೂಜ, ಹಾಟ್೯ ಲೀವಿಂಗ್ ಸಂಸ್ಥೆಯ ಮುಖ್ಯಸ್ಥೆ ಮಲ್ಲಿಕಾರ್ಜುನ ಸ್ವಾಮಿ, ನಗರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಸೇರಿದಂತೆ ಇತರರು ಇದ್ದರು.

Megha News