Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ/ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ/ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ. ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಮಂಡಲದಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.
ನೀರಾವರಿ ಕೃಷ್ಣಾ ಭಾಗ್ಯ ಜಲ ನಿಗಮ 3 ನೇ ಹಂತದಲ್ಲಿ 130 ಟಿಎಂಸಿ ನೀರು ಬಳಸಬೇಕು ಎಂಬ ಆದೇಶವಿದ್ದರೂ, ಅಫಿಡವಿಟ್ ಹಾಕಿಲ್ಲ. 2 ನೇ ಟ್ರಿಬ್ಯುನಲ್ ಬ್ರಿಜೇಶ್ ಕುಮಾರ್ ವರದಿ ಕೊಟ್ಟು 13 ವರ್ಷಗಳಾಯಿತು. 13 ವರ್ಷಗಳಿಂದ ಗೆಜೆಟ್ ಅಧಿಸೂಚನೆ ಆಗಿಲ್ಲ. ಇದು ಆಗದೇ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್ ಗೆ ಏರಿಸಲಾಗುವುದಿಲ್ಲ. ಈ ಬಗ್ಗೆ ಒತ್ತಾಯಿಸಲು ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ. ಆದರೆ ಪ್ರಧಾನಿಗಳು ಭೇಟಿಗೆ ಅವಕಾಶವನ್ನೇ ನೀಡುವುದಿಲ್ಲ. ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಮತ್ತು ಪರಿಸರದ ತೀರುವಳಿಯಾಗಬೇಕು. ಅವರು ಕೊಟ್ಟ ತಕ್ಷಣ ನಾವು ಕೆಲಸ ಪ್ರಾರಂಭ ಮಾಡುತ್ತೇವೆ. ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದರು.
ಕೃಷ್ನಾ ಮೇಲ್ದಂಡೆಗೆ 21 ಕೋಟಿ ರೂ.ಗಳ ಪರಿಷ್ಕøತ ಅಂದಾಜು ಪಟ್ಟಿ. 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಣೆಯಾಗಿದೆ. ಇವತ್ತಿನವರೆಗೆ ಒಂದು ರೂ.ಬಿಡುಗಡೆ ಯಾಗಿಲ್ಲ. ಆದರೆ ಮತ್ತೊಂದೆಡೆ ಕೇಂದ್ರ ಹಣಕಾಸು ಮಂತ್ರಿಗಳು ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಇಲ್ಲ ಎನ್ನುತ್ತಾರೆ. ನಾವು ಅಧಿಸೂಚನೆ ಆಗುವವರೆಗೆ ಪುನರ್ವಸತಿ ಮತ್ತು ಪುನಶ್ಚೇತನ ಕಾರ್ಯವನ್ನು ಕೈಗೊಳ್ಳುತ್ತೇವೆ. ನಾವು ಅತಿ, ಅತ್ಯಂತ, ಹಿಂದುಳಿದ ತಾಲ್ಲೂಕುಗಳನ್ನು ಅಭಿವೃದ್ಧಿ ಮಾಡಲು ಬದ್ಧರಿದ್ದೇವೆ ಎಂದರು.
ಮೇಕೆ ದಾಟು 2018 ರಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರ ಸಾಮಾನ್ಯ ವರ್ಷÀಗಳಲ್ಲಿ 177. 25 ಟಿಎಂಸಿ ತಮಿಳುನಾಡಿಗೆ ಕೊಡಬೇಕು ಎಂದು ತೀರ್ಪು ನೀಡಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳೂ ನೀರು ಹಂಚಿಕೊಳ್ಳಬೇಕು ಎಂದು ತಿಳಿಸಿದೆ. ಮೇಕೆದಾಟು ಯೋಜನೆಯು ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಮಾಡುವ ಸಲುವಾಗಿ ರೂಪಿಸಿರುವ ಯೋಜನೆ. ಅಣೆಕಟ್ಟು, ಬ್ಯಾಲೆಲ್ಸಿಂಗ್ ರಿಸರ್ವಾಯರ್ ಕರ್ನಾಟಕದ ವ್ಯಾಪ್ತಿಯಲ್ಲಿಯೇ ನಿರ್ಮಿಸುವುದು. ಇದರಿಂದ ತಮಿಳುನಾಡಿಗೆ ಏನೂ ಹಾನಿಯಿಲ್ಲ. ಬದಲಿಗೆ ಅನುಕೂಲವಾಗುತ್ತದೆ. ತಮಿಳುನಾಡು, ಕೇರಳ, ಆಂಧ್ರದ ಜೊತೆ ಮಾತುಕತೆ ವಿಫಲವಾಗಿ ನ್ಯಾಯಮಂಡಳಿಯು 193 ಟಿಎಂಸಿ ನೀರು ಕೊಡಬೇಕು ಎಂದು ತೀರ್ಪು ನೀಡಿತ್ತು. ನಂತರ 177.25 ಟಿಎಂಸಿ ಯನ್ನು ತಮಿಳುನಾಡಿಗೆ ಬಿಡಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ವಿವರಿಸಿದರು.
ಉತ್ತರ ಕರ್ನಾಟಕದ ಬಗ್ಗೆ ಸುದೀರ್ಘ ಚರ್ಚೆ:
ಉತ್ತರ ಕರ್ನಾಟಕದ ಚರ್ಚೆಯಲ್ಲಿ 42 ಜನ ಭಾಗವಹಿಸಿದ್ದು 11. ಗಂಟೆ 4 ನಿಮಿಷಗಳ ಕಾಲ ಮಾತನಾಡಿದ್ದಾರೆ. ರಾಜಕೀಯ ಬೆರೆಸದೆ ರಾಜ್ಯದ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಬಗ್ಗೆ ಚರ್ಚೆಯಾಗಿದೆ. ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಚರ್ಚೆಯಾಗಿದೆ. ಕಾಂಗ್ರೆಸ್ ನ 24 ಜನ ಬಿಜೆಪಿಯ 15 , ಜನತಾ ದಳದ 2 , ಪಕ್ಷೇತರರು ಒಬ್ಬರು ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಸಲಹೆಗಳನು ಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ ಬಿಜೆಪಿ ಮೂರು ವರ್ಷ ಆಡಳಿತ ನಡೆಸಿದಾಗ ಉತ್ತರ ಕರ್ನಾಟಕದ ಬಗ್ಗೆ ಒಮ್ಮೆ ಮಾತ್ರ ಚರ್ಚೆಯಾಗಿದೆ. ಮಾಧುಸ್ವಾಮಿಯವರು ಏಳೆಂಟು ಶಾಸಕರು ಮಾತನಾಡಿದ್ದಕ್ಕೆ 54 ಪದಗಳಲ್ಲಿ ಉತ್ತರ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

Megha News