Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local News

ಜಿಲ್ಲೆಯ ಪದವೀಧರರಲ್ಲಿ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ್ ಎಲ್ ಮನವಿ, ಈಶಾನ್ಯ ಪದವೀಧರರ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನಾಳೆ ಕೊನೆಯ ದಿನ

ಜಿಲ್ಲೆಯ ಪದವೀಧರರಲ್ಲಿ ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ್ ಎಲ್ ಮನವಿ,  ಈಶಾನ್ಯ ಪದವೀಧರರ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನಾಳೆ ಕೊನೆಯ ದಿನ

ರಾಯಚೂರು. ಕರ್ನಾಟಕ ಈಶಾನ್ಯ ಪದವೀ ಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನ. 6 ಕೊನೆಯ ದಿನವಾಗಿದ್ದು, ಅರ್ಹ ಪದವೀಧರರು ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಎಲ್ ಅವರು ಮನವಿ ಮಾಡಿದ್ದಾರೆ.

ಅರ್ಜಿದಾರರು ಅರ್ಹತಾ ದಿನಾಂಕ 01.11.2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತ ಮುಂಚೆ ಭಾರತದ ಯಾವುದೇ ವಿಶ್ವವಿದ್ಯಾಲಯದಿಂದ ಪದವೀಧರ ರಾಗಿರತಕ್ಕದ್ದು ಅಥವಾ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರ ಪ್ರಕರಣ 27 ಉಪಪ್ರಕರಣ 3(ಎ)ರನ್ವ ಯ ಭಾರತ ಚುನಾವಣಾ ಆಯೋಗದ ಸಹಮತ ದೊಂದಿಗೆ ರಾಜ್ಯ ಸರ್ಕಾರವು ವಿಶ್ವವಿದ್ಯಾಲಯದ ಪದವಿಗೆ ತತ್ಸಮಾನವೆಂದು ನಿರ್ದಿಷ್ಟ ಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. ದಿನಾಂಕ 01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ 18 ರಲ್ಲಿ (ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿಯನ್ನು ಪತ್ರಾಂ ಕಿತ ಅಧಿಕಾರಿಯಿಂದ ದೃಢೀಕರಿಸಿ ಮತ್ತು ಆಧಾ ರ್‌ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ಧೃಡೀಕರಿಸಿ ಅರ್ಜಿ ಯೊಂದಿಗೆ ನವೆಂಬರ್ 06 ರೊಳಗಾಗಿ ತಹಶೀಲ ಕಾರ್ಯಾಲಯದಲ್ಲಿ ಸಲ್ಲಿಸಬಹುದು. ಫಾರಂ- 18ರ ಅರ್ಜಿಗಳನ್ನು ತಹಶೀಲ್ದಾರ ಕಾರ್ಯಾಲ ಯದಿಂದ ಪಡೆಯಬಹುದು ಅಥವಾ https://ceo.karnata ka.gov.in/342/forms/kn ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿ ದ್ದಾರೆ.
ಪದವೀಧರರಲ್ಲಿ ಮನವಿ: ಸುಭದ್ರ ಹಾಗೂ ಜನ ಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂಬುದನ್ನು ಪದವೀಧರರು ಅರಿಯಬೇಕು. ಆದ್ದರಿಂದ ಅರ್ಹರು ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ರಾಯಚೂರು ಜಿಲ್ಲೆಯ ಎಲ್ಲ ಪದವೀಧರರಲ್ಲಿ ಮನವಿ ಮಾಡಿದ್ದಾರೆ.

Megha News