ರಾಯಚೂರು:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ದೀಪಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಂದ ಸ್ವೀಪ್ ಮಾದರಿಯಲ್ಲಿ ನಿಂತು ದೀಪಗಳನ್ನು ಹಿಡಿದು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನಂತರ ದೀಪಗಳನ್ನು ಹಿಡಿದು ನಗರದ ತೀನ್ ಕಂದಿಲ್ ವೃತ್ತ, ಸೂಪರ್ ಮಾರ್ಕೇಟ್, ಮಹಾವೀರ ವೃತ್ತ ಮಾರ್ಗವಾಗಿ ನಗರದ ಚಂದ್ರಮೌಳೇಶ್ವರ ವೃತ್ತದವರೆಗೆ ಜಾಗೃತಿ ನಡಿಗೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಮಾನೋರೋಗ ತಜ್ಞ ಡಾ.ಮನೋಹರ ಪತ್ತಾರ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಯಶೋದಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಶರಣಮ್ಮ, ಲಯನ್ಸ್ ಕ್ಲಬ್‌ನ ಡಾ.ವೆಂಕಟೇಶ, ಮತದಾರರ ಸಾಕ್ಷರತಾ ಕ್ಲಬ್‌ನ ದಂಡಪ್ಪ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.