ರಾಯಚೂರು: ಮೊಬೈಲ್ ಕಳೆದುಹೋದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚಿ ಮಾಲೀಕರಿಗೆ ವಿತರಿಸುತ್ತಿರುವುದು ಅತ್ಯಂತ ಶ್ಲಾಘನೀಯ ವಿಚಾರ. ಇದೇ ರೀತಿಯ ಜನರಿಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯಿಂದ ಸೇವೆ ಸಲ್ಲಿಸಲಾಗುತ್ತದೆ ಎಂದು ಎಸ್ಪಿ ಎಂ.ಪುಟ್ಟಮಾದಯ್ಯ ಹೇಳಿದರು.
ಅವರು ನಗರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಮೊಬೈಲ್ ಮಾಲಿಕರಿಗೆ ವಾಪಸ್ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿ, ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಅವರ ಮೊಬೈಲ್‌ಫೋನ್‌ಗಳನ್ನು ಪತ್ತೆ ಹಚ್ಚಿ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಸಿಬ್ಬಂದಿಯರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಜೊತೆಗೆ ಅವರ ಕಾರ್ಯ ಇತರರಿಗೂ ಪ್ರೇರಣೆಯಾಗಲಿದೆ ಎಂದು ತಿಳಿಸಿದರು. ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ 17 ಮೊಬೈಲ್‌ಗಳನ್ನು ಅವುಗಳ ಮಾಲೀಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಿಪಿಐ ಉಮೇಶ ಕಾಂಬ್ಳೆ, ಪಿಎಸ್‌ಐ ನರಸಮ್ಮ, ಪಿಸಿ ಶಿವಾನಂದ, ಡಬ್ಲ್ಯೂಪಿಸಿ ರೂಪಾ ಸೇರಿದಂತೆ ಇತರರಿದ್ದರು.