ರಾಯಚೂರು:- ರಾಯಚೂರು ಲೋಕಸಭಾ ಕ್ಷೇತ್ರದ ಮತದಾರರಾಗಿದ್ದು, ಲೋಕಸಭಾ ಕ್ಷೇತ್ರದ ಹೊರಗೆ ಅಥವಾ ಜಿಲ್ಲೆಯ ಹೊರಗೆ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಮತದಾನದ ದಿನಮತಗಟ್ಟೆಗೆ ಆಗಮಿಸಿ ಮತದಾನ ಮಾಡಲು ಸಾಧ್ಯವಾಗದೇ ಇರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಮತದಾನಕ್ಕಾಗಿ ಪೋಸ್ಟ ಲ್ವೋಟಿಂಗ್ ಸೆಂಟರ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ್ ಅವರು ತಿಳಿಸಿದ್ದಾರೆ.
ತಹಶೀಲ್ ಕಾರ್ಯಾಲಯ ರಾಯಚೂರಿನಲ್ಲಿ ಕೇಂದ್ರ ತೆರೆಯಲಾಗಿದ್ದು, ಮೇ ೧ರಿಂದ ೩ರವರೆಗೆ ಬೆಳಿಗ್ಗೆ ೯ರಿಂದ ಸಂಜೆ ೫ಗಂಟೆವರೆಗೆ ಮತದಾನಮಾಡಬಹುದಾಗಿದೆ. ನಿಗದಿತ ಕೇಂದ್ರದಲ್ಲಿ ಮಾತ್ರ ಎವಿಇಎಸ್ ಮತದಾರರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಇರುವುದಿಲ್ಲ. ಎವಿಇಎಸ್ ಮತದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.