ರಾಯಚೂರು. ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿ ತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಜೊತೆಗೆ ಎಚ್‌ಐವಿ ಸೋಂಕು ತಡೆಯುವ ಕುರಿತು ಜಾಗೃತಿ ಮೂಡಿಸುವುದರಿಂದ ನಿಯಂತ್ರಣ ಸಾಧ್ಯವಾಗು ತ್ತದೆ, ಸಾರ್ವಜನಿಕರಿಗೆ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಎ.ಸಾತ್ವಿಕ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ ರಾಯಚೂರು, ರಿಮ್ಸ್ ಬೋಧಕ ಆಸ್ಪತ್ರೆ, ನವೋದಯಾ ಆಸ್ಪತ್ರೆ, ಲಯನ್ಸ್ ಕ್ಲಬ್, ಐ.ಎಮ್.ಎ, ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ಎಸ್.ಕೆ ಪ್ಯಾರಾಮೆಡಿಕಲ್, ಎ.ಎಮ್.ಇ ಕಾಲೇಜು, ಹೊಸ ಬೆಳಕು, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್.ಎಸ್ ಘಟಕಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಏಡ್ಸ್ ದಿನ ನಿಮಿತ್ತ ಕುರಿತು ಜಾಗೃತಿ ಜಾಥಾಗೆ ಚಾಲನೆ ನೀಡಿ, ನಂತರ ಮಾತನಾಡಿದರು.
ಸಮಾಜದಲ್ಲಿ ಎಚ್‌ಐವಿ ಸೋಂಕಿತರಿಗೂ ಎಲ್ಲರಂತೆ ಬದುಕುವ ಹಕ್ಕಿದೆ. ಸೋಂಕಿತರನ್ನು ಸಮಾನತೆಯಿಂದ ನೊಡಿಕೊಳ್ಳುವುದು ನಮ್ಮೆಲ್ಲ ರ ಜವಾಬ್ದಾರಿ. ಮುಂದಿನ ದಿನಗಳಲ್ಲಿ ಏಡ್ಸ್ ಇತರರಿಗೆ ಹರಡದಂತೆ ತಡೆಯುವುದು ಅತ್ಯಾ ವಶ್ಯಕ. ಈ ನಿಟ್ಟಿನಲ್ಲಿ ಸಂಘ, ಸಂಸ್ಥೆಯವರೊಂ ದಿಗೆ ಸಮನ್ವಯ ಸಾಧಿಸಿ ಎಲ್ಲರ ಸಹಕಾರ ಪಡೆದು ಸೋಂಕು ತಡೆಗೆ ಮುಂದಾಗಬೇಕು ಎಂದರು.
ಭಾರತದಲ್ಲಿ ಕರ್ನಾಟಕವು ಎಚ್‌ಐವಿ ಸೋಂ ಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸೋಂಕಿನ ಬಗ್ಗೆ ಅರಿವು ಮೂಡಿಸಲು ವಿಶ್ವ ಏಡ್ಸ್ ದಿನ ಆಚರಣೆಯನ್ನು ಆಚರಿಸಿಕೊಂಡು ಬರಲಾ ಗುತ್ತಿದೆ. ಏಡ್ಸ್ ದಿನದ ಮಹತ್ವವನ್ನು ಪ್ರತಿಯೊ ಬ್ಬರು ಅರಿಯಬೇಕು. ದೇಶವನ್ನು ಏಡ್ಸ್ನಿಂದ ಮುಕ್ತಗೊಳಿಸಲು ಎಲ್ಲರು ಪಣತೊಡಬೇಕು ಎಂದರು.
ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಂ ಪಾಂಡ್ವೆ ಮಾತನಾಡಿ, ವಿಶ್ವ ಏಡ್ಸ್ ದಿನಾಚರಣೆಯ ಈ ವರ್ಷದ ಘೋಷವಾಕ್ಯ ಹಕ್ಕುಗಳನ್ನು ಪಡೆ ಯಲು ಸರಿಯಾದ ಮಾರ್ಗ ಅನುಸರಿಸೋಣ, ನನ್ನ ಆರೋಗ್ಯ ನನ್ನ ಹಕ್ಕು ಎಂಬುದಾಗಿದ್ದು, ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ೩,೭೦೦ ಸೋಂಕಿತರನ್ನು ಪತ್ತೆ ಹಚ್ಚಲಾಗಿದೆ. ಹೆಚ್.ಐ.ವಿ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಮು ಖವಾಗಿದ್ದು, ರಾಯಚೂರು ಜಿಲ್ಲೆಯು ೦.೪೭% ಇದೆ. ಇದನ್ನು ಇನ್ನೂ ಕಡಿಮೆ ಮಾಡಲು ಆರೋ ಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮು ಜವಾಬ್ದಾರಿ, ಕರ್ತವ್ಯಗಳನ್ನು ಅರಿತು ಕಾರ್ಯನಿರ್ವನಿಹಿಸಬೇಕೆಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾ ಧಿಕಾರಿ ಡಾ.ಮಹ್ಮದ್ ಶಾಕೀರ ಮೊಹಿಯು ದ್ದೀನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ರಿಮ್ಸ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ರಾಹುಲ್ ಕೀರ್ತೆ, ನವೋದಯ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಎಸ್.ಕೆ.ಇ.ಎಸ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಬಾಬುರಾವ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ಡಾ.ದಂಡಪ್ಪ ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಲಕ್ಷ್ಮಿ ಮಂಡಾಸ್, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಸಂಧ್ಯಾ ನಾಯಕ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ.ಕೆ ಸೇರಿದಂತೆ ವಿವಿಧ ಅಧಿಕಾರಿ ಸಿಬ್ಬಂದಿಗಳು ಹಾಗೂ ರಿಮ್ಸ್, ನವೋದಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.