ರಾಯಚೂರು: ರಾಯಚೂರು ತಾಲ್ಲೂಕಿನ ಯರಗೇರಾ ಬಳಿಯ ರಾಯಚೂರು ವಿಶ್ವವಿದ್ಯಾಲಯದ ಬಳಿ ಕೆಎಸ್ ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಜರುಗಿದೆ.
ಮೃತಪಟ್ಟ ಬೈಕ್ ಸವಾರನನ್ನು ಗೋನ್ವಾರ್ ಗ್ರಾಮದ ತಿಮ್ಮಾರೆಡ್ಡಿ ಎಂದು ಗುರುತಿಸಲಾಗಿದೆ. ಈತ ರಾಯಚೂರಿನಿನಿಂದ ಮಂತ್ರಾಲಯದ ಕಡೆಗೆ ಹೊರಟಿದ್ದ, ಏಕಾಏಕಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಕಟ್ಟಡ ಕಾರ್ಮಿಕನಾಗಿ ಕೆಲಸಮಾಡುತ್ತಿದ್ದ ಎಂದು ಹೇಳಲಾಗಿದೆ.
ಘಟನೆಯಿಂದ ಬೈಕ್ ಸವಾರನಿಗೆ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿ ಸಾವುಗೀಡಾಗಿದ್ದಾನೆ.
ಘಟನೆಯ ಬಳಿಕ ಮಾಹಿತಿ ಪಡೆದ ಯರಗೇರಾ ಪೊಲೀಸ್ ಠಾಣೆಯ ಪಿಎಸ್ ಐ ಅರುಣಕುಮಾರ ರಾಥೋಡ್ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಿಸಿದರು.ಮತ್ತೋರ್ವ ಗಾಯಳನ್ಬು ತಿಮ್ಮಪ್ಪನಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ.