ರಾಯಚೂರು. ಹಾವು ಕಚ್ಚಿ ಬಾಲಕನೋರ್ವ ಮೃತಪಟ್ಟಿರುವ ಘಟನೆತಾಲೂಕಿನ ರಘುನಾಥ ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕ ಶ್ರೀಕಾಂತ (10) ವರ್ಷ ಎಂದು ತಿಳಿದು ಬಂದಿದೆ.
ಸೆ.21ರಂದು ಗ್ರಾಮದಲ್ಲಿ ರಾತ್ರಿ ಸಮಯದಲ್ಲಿ ಹಾವು ಕಚ್ಚಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕಳೆದ ರಾತ್ರಿ ಮೃತಪಟ್ಟಿದ್ದಾನೆ. ಮೃತ ಬಾಲಕ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎನ್ನಲಾಗಿದೆ.
ಗ್ರಾಮದ ರಸ್ತೆ ಪಕ್ಕದಲ್ಲಿ ಬೀದಿ ದೀಪಗಳು ಇಲ್ಲದೇ ಇರುವುದರಿಂದ ಈ ಅವಘಡಕ್ಕೆ ಕಾರವಾಗಿದೆ, ಗ್ರಾಪಂ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿಯು ಬೀದಿ ದೀಪಗಳನ್ನು ಅಳವಡಿಸಿಲ್ಲ, ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸಲು ಜನರಿಗೆ ತೊಂದರೆ ಉಂಟಾಗಿದೆ.
ಒಬ್ಬರನ್ನು ಬಲಿ ಪಡೆದ ಗ್ರಾಮ ಪಂಚಾಯತಿ ಈಗಲಾದರೂ ಎಚ್ಚೆತ್ತುಕೊಂಡು ಬೀದಿ ದೀಪ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.ಮಗನನ್ನು ಕಳೆದುಕೊಂಡ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.