Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ರಾಯಚೂರಿನ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ

ರಾಯಚೂರಿನ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಯಚೂರಿನ ವಿಜ್ಞಾನ ಕೇಂದ್ರವನ್ನು ಕೆಟಗರಿ – 2 ವಿಜ್ಞಾನ ಕೇಂದ್ರವಾಗಿ ಅಂದಾಜು ರೂ. 22.25 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ತಿಳಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಯನ್ನು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳೂ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅಧ್ಯಕ್ಷನಾಗಿದ್ದ ಸಂಧರ್ಭದಲ್ಲಿ ಅಗತ್ಯ ಅನುದಾನ ನೀಡುವ ಮೂಲಕ ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸಂಸ್ಕೃತಿ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಖುದ್ಧು ಭೇಟಿ ಮಾಡಿ ಉನ್ನತೀಕರ ಣಕ್ಕಾಗಿ ಮನವಿ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.

ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕೇಂದ್ರ ತಂಡ ರಾಯಚೂರಿಗೆ ಭೇಟಿ ನೀಡಿತು. ಕೇಂದ್ರ ಸರಕಾರಕ್ಕೆ ಈ ತಂಡ ಸಲ್ಲಿಸಿದ ವರದಿಯ ಅನ್ವಯ ಕೆಟಗರಿ – 2 ರ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸುವಂತಹ ಪ್ರಸ್ತಾವನೆಯನ್ನ ಸಚಿವ ಸಂಪುಟಕ್ಕೆ ಸಲ್ಲಿಸಲಾಗಿತ್ತು. ಕೂಲಂಕುಷವಾದ ಚರ್ಚೆಯ ನಂತರ, ಪ್ರಸ್ತಾವನೆಯು ಸಂಪುಟ ಸಭೆಯಲ್ಲಿ ಸರ್ವಾನುಮತದ ಅನುಮೋದನೆಯನ್ನು ಪಡೆಯಿತು ಎಂದು ಹೇಳಲಾಗಿದೆ.

Megha News