ರಾಯಚೂರ ಏಪ್ರಿಲ್ 2: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸನ್ನಿಹಿತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ರಾಯಚೂರು ನಗರದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನ ನಿರ್ಮಿಸಲು ಪರಿಸರ ಇಲಾಖೆ ಅನುಮತಿ ನೀಡಿರುವದು ಕಾಮಗಾರಿ ವೇಗಕ್ಕೆ ಸಹಕಾರಿಯಾಗಿದೆ.
ನಮ್ಮ ರಾಜ್ಯ ಸರಕಾರ ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಸರ್ಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಬಗ್ಗೆ ಕೈಗಾರಿಕೆ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ ಪಾಟೀಲ್ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕೂಡಾ ವಿಶೇಷ ಒತ್ತು ನೀಡಿದ್ದರು.
.ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು, ಅಗತ್ಯ ಅನುಮತಿಯನ್ನು ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ತ್ವರಿತಗತಿಯಲ್ಲಿ ಕೇಂದ್ರ ಪರಿಸರ ಮಂತ್ರಾಲಯ ದಿಂದ ಅನುಮತಿ ದೊರೆತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ವಿಮಾನಯಾನ ಸಚಿವರಿಗೆ ಅಭಿನಂದನೆ ಸಲ್ಲಿಸುವದಾಗಿ ತಿಳಿಸಿದ್ದಾರೆ.
Megha News > State News > ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಅನುಮತಿ- ಎನ್.ಎಸ್.ಬೋಸರಾಜ
ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಅನುಮತಿ- ಎನ್.ಎಸ್.ಬೋಸರಾಜ
Tayappa - Raichur02/04/2025
posted on

Leave a reply