ವಿಜಯನಗರ, ಡಿ. 12: ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಚಾಮರಾಜನಗರದಲ್ಲಿ ನಡೆದ ಆಕಳು ಕೆಚ್ಚಲು ಕತ್ತರಿಸಿದಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ ವಾಗಿದೆ ಎಂದರು.
ಹಿಂದುಳಿದ ವರ್ಗ ಜಾತಿಗಣತಿ ಕುರಿತು ಸಚಿವ ಸಂಪುಟದಲ್ಲಿ ಮಂಡಿಸಲಾಗುತ್ತದೆ.೧೬೦ ಕೋಟಿ ವೆಚ್ಚ ಮಾಡಲಾಗಿದೆ.ಪರ ವಿರೋಧ ಎನೆ ಅಭಿಪ್ರಾಯಗಳಿರಬಹುದು.ಚರ್ಚೆನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.