ರಾಯಚೂರು. ಪ್ರಾಥಮಿಕ ಶಾಲಾ ಶಿಕ್ಷಕರ ಬಹುದಿನಗಳ ಬೇಡಿಕೆಗಾಗಿ ಆ. 12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಮತ್ತು ತಾಲೂಕ ಘಟಕ ಕರೆ ನೀಡಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸಲು ತಾಲೂಕಾಧ್ಯಕ್ಷ ಮಲ್ಲೇಶ ನಾಯಕ ಜಿಲ್ಲಾಧ್ಯಕ್ಷ ಚಂದ್ರಶೇಖರ್ ರೆಡ್ಡಿ ಶಿಕ್ಷಕರಲ್ಲಿ ಮನವಿ ಮಾಡಿದ್ದಾರೆ.
ಶಿಕ್ಷಕರ ಬಹುದಿನಗಳ ಬೇಡಿಕೆಗಳನ್ನು ಸರ್ಕಾರಕ್ಕೆ ಹಲವಾರು ಬಾರಿ ಮನವಿಗಳನ್ನು ನೀಡಿದ್ದರೂ ಸರ್ಕಾರ ಬೇಡಿಕೆಯನ್ನು ಈಡೇರಿಸದಿದ್ದಕ್ಕಾಗಿ ಅನಿವಾರ್ಯವಾಗಿ ಮುಷ್ಕರವನ್ನು ಹಮ್ಮಿಕೊಳ್ಳ ಲಾಗಿದೆ.
ಮುಷ್ಕರದ ಮಾಹಿತಿಯನ್ನು ಈಗಾಗಲೇ ಜಿಲ್ಲಾ ಹಂತದಲ್ಲಿ ಲೋಕಸಭಾ ಸದಸ್ಯರಿಗೆ,ವಿಧಾನ ಸಭಾ ಸದಸ್ಯರಿಗೆ, ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳಿಗೆ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರುಗಳಿಗೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾ ರಿಗಳಿಗೆ, ಇದರ ಬಗ್ಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ.
ಸರ್ಕಾರಿ ನೌಕರಿಗೆ ಸೇರಿದವರು ಪ್ರತಿ ಇಲಾಖೆ ಯಲ್ಲಿ ಮುಂಬಡ್ತಿಯನ್ನು ಹೊಂದುತ್ತಿದ್ದಾರೆ. ದುರ್ದೈವಶಾತ ನಮ್ಮ ಶಿಕ್ಷಕರು ಹಿಂಬಡ್ತಿಯನ್ನು ಹೊಂದುತ್ತಿದ್ದಾರೆ. ಅದನ್ನು ಸರಿಪಡಿಸಲು ರಾಜ್ಯಮಟ್ಟದಲ್ಲಿ ಬೃಹತ್ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಅನ್ಯಾಯವಾಗಿರುವ ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗದೆ ಹೆಚ್ಚಿನ ಸಂಖ್ಯೆಯ ಶಿಕ್ಷಕರು ಹೋರಾಟದಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.