Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics NewsState News

ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಒಳಮೀಸಲಾತಿ ಜಾರಿ ಬಗ್ಗೆ ಪರಿಶೀಲನೆ:-
ಒಳಮೀಸಲಾತಿ ಜಾರಿ ತರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ , ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಬಿಜೆಪಿ ಜೆಡಿಎಸ್ ಪಕ್ಷ ದುರ್ಬಲವಾಗುವ ಭಯ ಕಾಡುತ್ತಿದೆ:-
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಜಿ.ಟಿ.ದೇವೇಗೌಡರು ಅವರು ಜೆಡೆಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು,ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ ಎಂದರು.
ಊಹಾಪೋಹಗಳು ಬೇಡ:-
ಸಚಿವ ಸತೀಶ್ ಜಾರಕಿಹೊಳಿಯವರು ಪಕ್ಷದ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದರು.

Megha News