Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾ ರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂತರಾಜು ಆಯೋಗದ ಜಾತಿಗಣತಿ ವರದಿ ಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತ ರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾ ಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗ ಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.
ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ:- ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡು ವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪ ಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿ ಡುವ ಕೆಲಸ ಮಾಡುತ್ತೇವೆ ಎಂದರು.
ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ:-
ಜೆಡಿಎಸ್‌ನ ಜಿಟಿದೇವೇಗೌಡ, ಮುಖ್ಯಮಂತ್ರಿಯ ವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ , ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.
ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ , ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.
ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ:-
ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

 

Megha News