Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ, ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ, ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು ಸೆಳೆದಿರುವುದಾಗಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ:-ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಉಪಚುನಾವಣೆ ಎದುರಿಸಲು ಸಿದ್ಧ:-ರಾಜ್ಯದಲ್ಲಿ ನಡೆಯುವ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದರು.

Megha News