ಬೆಂಗಳೂರು: ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟೀಸನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಟಿ. ಜೆ.ಅಬ್ರಹಾಂ ಅವರು ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಸಲಹೆ ನೀಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಕಾರಣ ಕೇಳಿ ನೋಟೀಸು ನೀಡಿರುವ ಬಗ್ಗೆ ಅವರು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.v