ರಾಯಚೂರು.ಮಸ್ಕಿ ತಾಲೂಕ ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ರವರ ಸಂಯೋಗದಲ್ಲಿ ಮಸ್ಕಿ ಪಟ್ಟಣದ ವಿವಿಧ ಹೋಟೆಲ್, ಗ್ಯಾರೇಜ್, ಬೇಕರಿ, ಅಂಗಡಿ, ಬಾರ್&ರೆಸ್ಟೋರೆಂಟ್ ಮತ್ತು ಇನ್ನಿತರೆ ಉದ್ದಿಮೆಗಳಲ್ಲಿ ತಪಾಸಣೆ ಮಾಡಿದಾಗ ಮಸ್ಕಿ ಪಟ್ಟಣದ “ಉಡುಪಿ ಐಶ್ವರ್ಯ ಹೋಟೆಲ್” ಕೆಲಸ ಮಾಡುತ್ತಿದ್ದ ಮಗುವನ್ನು ರಕ್ಷಣೆ ಮಾಡಿ, ೯ನೇ ತರಗತಿಗೆ ದಾಖಲು ಮಾಡಿ, ಪಾಲಕರಿಗೆ ಒಪ್ಪಿಸಲಾಯಿತು. ಮಗುವನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ “ಉಡುಪಿ ಐಶ್ವರ್ಯ ಹೋಟೆಲ್” ನ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಯಿತು.
ದಾಳಿಯ ತಂಡದಲ್ಲಿ ಮಸ್ಕಿ ತಹಶೀಲ್ದಾರ ಅರಮನೆ ಸುಧಾ, ಬಾಲಕಾರ್ಮಿ ಯೋಜನೆಯ ಯೋಜನಾಧಿಕಾರಿ ಮಂಜುನಾಥರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ, ಮಸ್ಕಿ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಶಿಕ್ಷಣ ಇಲಾಖೆಯ ಸಿಆರ್‌ಪಿ ರಾಮಸ್ವಾಮಿ, ಪಾಲ್ಗೊಂಡಿದ್ದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ೨೦೧೬ ರಂತೆ ೧೪ ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ ರೂ. ೫೦,೦೦೦/- ದಂಡ ಹಾಗೂ ೨ ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ, ಕಾರಣ ಮಕ್ಕಳನ್ನು ದುಡಿಸಿಕೊಳ್ಳಬಾರದು.
Megha News > Local News > ಬಾಲ ಕಾರ್ಮಿಕ ಬಾಲಕ ರಕ್ಷಣೆ
ಬಾಲ ಕಾರ್ಮಿಕ ಬಾಲಕ ರಕ್ಷಣೆ
Tayappa - Raichur17/01/2024
posted on
Leave a reply