Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Crime News

ಕಿಶೋರ ಕಾರ್ಮಿಕನ ರಕ್ಷಣೆ: ಪ್ರಕರಣ ದಾಖಲು

ಕಿಶೋರ ಕಾರ್ಮಿಕನ ರಕ್ಷಣೆ: ಪ್ರಕರಣ ದಾಖಲು

ರಾಯಚೂರು- ತಾಲೂಕ ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮತ್ತು ಪೊಲೀಸ್ ಇಲಾಖೆ ರವರ ಸಂಯೋಗದಲ್ಲಿ ಮಾನವಿ ತಾಲೂಕಿನ ವಿವಿಧ ಗ್ಯಾರೇಜ್, ಹೋಟೆಲ್, ಬಟ್ಟೆ ಅಂಗಡಿ, ಕಿರಾಣಿ ಅಂಗಡಿ ಮತ್ತು ಬೇಕರಿ ಇನ್ನಿತರೆ ಉದ್ದಿಮೆಗಳಲ್ಲಿ ತಪಾಸಣೆ ಮಾಡಿದಾಗ ಮಿತ್ರ ಪರೋಟ ಹೋಟೆಲ್ ಅಂಬೇಡ್ಕರ್ ವೃತ್ತ ಮಾನವಿನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ೯ನೇ ತರಗತಿಗೆ ದಾಖಲು ಮಾಡಿ, ಪೋಷಕರಿಗೆ ಒಪ್ಪಿಸಲಾಯಿತು. ಮಗುವನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ “ಮಿತ್ರ ಪರೋಟ ಹೋಟೆಲ್” ನ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಯಿತು.

ದಾಳಿಯ ತಂಡದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ, ಮಾನವಿ ಕಾರ್ಮಿಕ ನಿರೀಕ್ಷಕ ಮಲ್ಲಪ್ಪ, ಶಿಕ್ಷಣ ಇಲಾಖೆ ಸಿ.ಆರ್.ಪಿಗಳಾದ ಸೋಮಶೇಖರ, ಅಲೇಶ, ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಸೂಪರ್‌ವೈಜರ್ ನಿರ್ಮಾಲ, ಪೊಲೀಸ್ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ೨೦೧೬ ರಂತೆ ೧೪ ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ ರೂ. ೫೦,೦೦೦/- ದಂಡ ಹಾಗೂ ೨ ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ, ಕಾರಣ ಮಕ್ಕಳನ್ನು ದುಡಿಸಿಕೊಳ್ಳಬಾರದೆಂದು ಕೋರಲಾಗಿದೆ.

 

Megha News