ರಾಯಚೂರು. ಸಿಂಧನೂರು ತಹಶೀಲ್ದಾರ ಅರುಣ್.ಹೆಚ್ ದೇಸಾಯಿ ಅದ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆ ಜರುಗಿತು. ನಂತರ ತಾಲೂಕ ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಶಿಶು ಅಭಿವೃದ್ಧಿ ಯೋಜನೆರವರ ಸಂಯೋಗದಲ್ಲಿ ಸಿಂಧನೂರು ತಾಲೂಕಿನ ವ್ಯಾಪ್ತಿಯ ವಿವಿಧ ಹೋಟೆಲ್, ಬಟ್ಟೆ ಅಂಗಡಿ, ಕಿರಾಣಿ ಅಂಗಡಿ ಮತ್ತು ಬೇಕರಿ ಇನ್ನಿತರೆ ಉದ್ದಿಮೆಗಳಲ್ಲಿ ತಪಾಸಣೆ ಮಾಡಿದಾಗ “ನ್ಯೂ ಬೃಂದಾವನ ಹೋಟೆಲ್” ಸಿಂಧನೂರಿನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಶಾಲೆಗೆ ದಾಖಲಿಸಿ, ಪೋಷಕರಿಗೆ ಒಪ್ಪಿಸಲಾಯಿತು. ಮಗುವನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ “ನ್ಯೂ ಬೃಂದಾವನ ಹೋಟೆಲ್”ನ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಯಿತು.
ಈ ದಾಳಿಯಲ್ಲಿ ಗ್ರೇಡ್-೨ ತಹಶೀಲ್ದಾರ ಚಂದ್ರಶೇಖರ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ, ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ, ಸಿಡಿಪಿಓಗಳಾದ ಲಿಂಗನಗೌಡ, ಅಶೋಕ,ಕಂದಾಯ ನಿರೀಕ್ಷಕ ಲಿಂಗರಾಜ, ಸಿಆರ್‌ಪಿ ಹನುಮಂತ,ಜಿಲ್ಲಾ ಮಕ್ಕಲ ರಕ್ಷಣಾ ಘಟಕದ ದಿನೇಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.