ರಾಯಚೂರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆ ಮತ್ತು ಪೊಲೀಸ್ ಇಲಾಖೆಯ ವತಿಯಿಂದ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಯಾನಂದ.ಎA ಬೇಲೂರೆ, ಅವರ ನೇತೃತ್ವದಲ್ಲಿ ರಾಯಚೂರು ತಾಲೂಕಿನ ವಿವಿಧ ಕಾರ್ಖಾನೆಗಳನ್ನು ತಪಾಸಣೆ ಕೈಗೊಂಡಾಗ ಜಿ.ಆರ್.ಎಸ್, ಆಗ್ರೋ ಇಂಡಸ್ಟಿçÃಸ್‌ನ ಕಾಟನ್ ಜಿನಿಂಗ್ ರಾಯಚೂರುನಲ್ಲಿ ಕೆಲಸ ಮಾಡುತ್ತಿದ್ದ ಮಗುವನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿ ರಾಯಚೂರಿಗೆ ಒಪ್ಪಿಸಲಾಯಿತು. ಮಗುವನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಜಿ.ಆರ್.ಎಸ್, ಆಗ್ರೋ ಇಂಡಸ್ಟಿçÃಸ್‌ನ ಮಾಲೀಕರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆ ರಾಯಚೂರುನಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ದಾಳಿಯ ತಂಡದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲ ಕಾಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ,ಕಾರ್ಮಿಕ ನಿರೀಕ್ಷಕ ಪರಶುರಾಮ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಕಾಶರೆಡ್ಡಿ ಡಂಬಳ, ಶಿಶು ಅಭಿವೃದ್ಧಿ ಯೋಜನೆಯ ಪ್ರದಸ ಶಮಿಮ್‌ಬೇಗಂ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆಯ ಕಾರ್ಯನಿರ್ವಾಹಕ ಆಡಳಿತ ಸಹಾಯಕ ಶ್ಯಾಮ ಸುಂದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.