Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ

44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು.  ಬೆಂಗಳೂರಿನ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,  ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ  ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ  ಭದ್ರತೆ ಒದಗಿಸಿ,ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ  ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದು ತಿಳಿಸಿದ್ದಾರೆ.

ಕೆಂಗಲ್ ಹನುಮಂತಯ್ಯ ಅವರು  ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲುವಾಸ ಅನುಭವಿಸಿದರು. ಕರ್ನಾಟಕ ಏಕೀಕರಣಕ್ಕೆ ಹೋರಾಡಿದರು. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಕೆಂಗಲ್ ಹನುಮಂತಯ್ಯನವರು ಮುಖ್ಯ ಮಂತ್ರಿಗಳಾಗಿದ್ದಾಗ ವಿಧಾನಸೌಧವನ್ನು ಕಟ್ಟಿದರು.   ಅವರೇ ಸ್ವತ ನಿಂತು ಉಸ್ತುವಾರಿ ವಹಿಸಿದ್ದರು. ಇಡೀ ದೇಶದಲ್ಲಿಯೇ ಸುಂದರವಾದ ವಿಧಾನಮಂಡಲದ ಕಟ್ಟಡ ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ  ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

Megha News