ರಾಯಚೂರು. ಜೆಡಿಎಸ್ ಪಕ್ಷ ಎನ್‌ಡಿಎ ಅಂಗವಾಗಿರುವದರಿಂದ ಮುಂಬರುವ ತಾಪಂ, ಜಿಪಂ ಚುನಾವಣೆಗಳು ಹೊಂದಾಣಿಕೆಯೊಂದಿಗೆ ಸ್ಪರ್ಧಿಸಲಾಗುವುದು, ವಿವಿಧ ಕ್ಷೇತ್ರಗಳಲ್ಲಿರುವ ಗೊಂದಲಗಳನ್ನು ರಾಜ್ಯ ನಾಯಕರು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದು
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಸಿಂಧನೂರಿನಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರ ಹುಟ್ಟುಹಬ್ಬ, ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೊಂದಣಿ ಕಾರ್ಯಕ್ರಮ ವೇಳೆ ಮಾಧ್ಯಮದ ವರೊಂದಿಗೆ ಮಾತನಾಡಿದರು,ಬಿಜೆಪಿ ಜತೆಗೂಡಿಯೇ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮುಂದಾಗಿದೆ, ಜೆಡಿಎಸ್ ಪಕ್ಷ ಎನ್‌ಡಿಎ ಅಂಗವಾಗಿರುವದರಿಂದ ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ಹೊಂದಾಣಿ ಕೆಯೊಂದಿಗೆ ಸ್ಪರ್ಧಿಸಲಾಗುವುದು ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಪಕ್ಷದ ವೇದಿಕೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಕುಮಾರಣ್ಣ ಅವರು ಕೇಂದ್ರ ಸಚಿವರಾಗಿ ಪಕ್ಷದ ಅಧ್ಯಕ್ಷರಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡುವಂತಿದ್ದರೆ ಪಕ್ಷದಲ್ಲಿ ಹಿರಿಯರು, ಅನುಭವಿಗಳು ಇದ್ದಾರೆ. ಅವರಿಗೆ ಆದ್ಯತೆ ನೀಡಲಾಗುತ್ತದೆ. ಈಗ ಈ ವಿಷಯ ಅಪ್ರಸ್ತುತ ಎಂದರು.