ರಾಯಚೂರು- ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರಿಡಾಂಗಣದಲ್ಲಿ ಮಾ.೧೪ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮದ ಕುರಿತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶವು ಮಾ.೧೪ರಂದು ನಡೆಯಲಿರುವುದರಿಂದ ಕಾರ್ಯಕ್ರಮಕ್ಕೆ ಆಗಮಿಸುವ ತಾಲೂಕುವಾರು ಫಲಾನುಭವಿಗಳಿಗಾಗಿ ಅಗತ್ಯ ಬಸ್ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ತಾಲೂಕುಗಳಿಗೆ ದಿನನಿತ್ಯ ಮಾರ್ಗದಲ್ಲಿ ಹೆಚ್ಚುವರಿ ಬಸ್‌ಗಳನ್ನು ಒದಗಿಸುವಂತೆ ತಿಳಿಸಿದರು.
ಕಾರ್ಯಕ್ರಮ ನಡೆಯುವ ಪ್ರದೇಶದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆಯನ್ನು ಸಂಬAಧಪಟ್ಟ ಅಧಿಕಾರಿಗಳು ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದAತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗೊಳ್ಳುವ ಕಾರ್ಯಕ್ರಮಗಳ ಪಟ್ಟಿ ತಯಾರಿಸಬೇಕು. ಮುಖ್ಯವಾಗಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ, ಸಹಾಕಯ ಆಯುಕ್ತ ಎಸ್.ಎಸ್ ಸಂಪಗಾವಿ, ತಹಶೀಲ್ದಾರ ಸುರೇಶ ವರ್ಮಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ.ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.