ರಾಯಚೂರು. ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಅವರು ಗೆಲುವು ಸಾಧಿಸಿದ್ದಾರೆ.
ಗುರುವಾರ ತಡರಾತ್ರಿವರೆಗೂ ಮತ ಎಣಿಕೆ ಕಾರ್ಯ ನಡೆಸಲಾಯಿತು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಸತತ ಎರಡನೇ ಭಾರಿಗೆ ಗೆಲುವಿನ ನಗೆ ಬಿರಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
ಗುರುವಾರ ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯವು ಕಲಬುರಗಿ ನಗರದ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆದಿದ್ದು, ಸಂಜೆ 4 ಗಂಟೆವರೆಗೆ ಬ್ಯಾಲೇಟ್ ಪೇಪರ್ ಜೋಡಿಕೆ ಮಾಡಿ ನಂತರ ಮತಗಳ ಎಣಿಕೆ ಕೈಗೊಳ್ಳಲಾಗಿದೆ. ಇಡಿ ರಾತ್ರಿ ಮತಗಳ ಎಣಿಕೆ ನಡೆದು ಇಂದು ಪ್ರಥಮ ಪ್ರಾಶಸ್ತ್ಯದ ಅಂತಿಮ ಎಂಟನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಪ್ರಥಮ ಪ್ರಾಶಸ್ತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇ ಖರ್ ಪಾಟೀಲ್ ಅವರಿಗೆ 39,496 ಮತಗಳು ಪಡೆದು 4,446 ಮತಗಳಿಂದ ಪ್ರತಿಸ್ಪರ್ಧಿ ಬಿಜೆಪಿಯ ಅಮರನಾಥ ಪಾಟೀಲ್ ಗಿಂತ ಮುನ್ನಡೆ ಸಾಧಿಸಿದ್ದರು.
ಆದರೆ ವಿನ್ನಿಂಗ್ ಕೋಟಾ 48,260 ಫಿಕ್ಸ್ ಮಾಡಿದ್ದರಿಂದ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ಮಾಡಲಾಯಿತು. ಅದರಲ್ಲೂ ಕಾಂಗ್ರೆಸ್ ಅಭ್ಯ ರ್ಥಿ ಚಂದ್ರಶೇಖರ್ ಪಾಟೀಲ್ ಭರ್ಜರಿ ಜಯಗಳಿಸಿದ್ದಾರೆ.