ರಾಯಚೂರು. ಲಿಂಗಸೂಗುರು ಪೋಲೊಸ್ ಠಾಣೆಯಯಲ್ಲಿ ಕೆಲಸ ಮಾಡುತ್ತಿದ್ದ ಪೇದೆ ವಿಜಯ ಕುಮಾರ ಕರ್ತವ್ಯ ಲೋಪದಡಿಯಲ್ಲಿ ಅಮಾನತು ಮಾಡಿ ಜಿಲ್ಲಾ ಪೋಲಿಸ್ ವರಿಷ್ಠಾ ಧಿಕಾರಿ ಎಂ ಪುಟ್ಟಮಾದಯ್ಯ ಆದೇಶಿಸಿದ್ದಾರೆ.
ಶಿಸ್ತಿನ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯ ಕುಮಾರ್ ಎನ್ನುವ ಪೇದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಪರಿಣಾಮ ಅಮಾನತು ಮಾಡಲಾಗಿದೆ.
ಡಿವೈಎಸ್‌ಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ ಕುಮಾರ ಅವರನ್ನು ಕಳೆದ ಒಂದು ತಿಂಗಳ ಹಿಂದೆಯೇ ರಾಯಚೂರಿಗೆ ವರ್ಗಾವಣೆ ಮಾಡಲಾಗಿತ್ತು. ಇಲಾಖೆಯಲ್ಲಿ ಕರ್ತವ್ಯ ನಿರ್ಲ ಕ್ಷಿಸಿ ಮನಬಂದಂತೆ ವರ್ತಿಸುತ್ತಿದ್ದ ಪೇದೆಯನ್ನು ಅಮಾನತ್ತು ಮಾಡಿರುವುದಾಗಿ ತಿಳಿಸಿದ್ದಾರೆ.
ಇಲಾಖೆಗೆ ಅಗೌರವದ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಅಮಾನತ್ತು ಮಾಡಲಾ ಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಪುಟ್ಟಮಾದಯ್ಯ ತಿಳಿಸಿದ್ದಾರೆ.