ರಾಯಚೂರು. ಕಲ್ಮಲಾದಿಂದ ಸಿಂಧನೂರು ವರೆಗೆ ರಾಜ್ಯ ಹೆದ್ದಾರಿಯ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ,
ಕಲ್ಮಲಾದಿಂದ ಸಿಂಧನೂರು ವರೆಗೆ ರಾಜ್ಯ ಹೆದ್ದಾರಿಯ ಚತುಷ್ಪಥ ರಸ್ತೆ ನಿರ್ಮಾಣ ಮಾಡುತ್ತಿದ್ದು ಈಗಾಗಲೇ ಸರ್ವೆ ನಡೆಸಲಾಗಿದೆ, ಸರ್ವೆಯಲ್ಲಿ ಭೂಮಿ ಕಳೆದುಕೊಂಡು ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂದರು.
ಕೆಕೆಆರ್‌ಡಿಬಿ ಯಿಂದ 5 ಕೋಟಿ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ 4.5ಕೋಟಿ ಅನುದಾನದಲ್ಲಿ ಎಕ್ಸ್‌ಪ್ರೆಸ್ ಬಸ್ ನಿಲ್ದಾ ಣ ನಿರ್ಮಾಣ, 15 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.