ಸಿಂಧನೂರು.ಅತ್ಯಾಚಾರ ಆರೋಪಿಗೆ 3ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಬಿ ಜಕಾತಿ ಅವರು ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯದ ತೀರ್ಪು ನೀಡಿದೆ.
ಸಿಂಧನೂರು ತಾಲೂಕಿನ ತುರವಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ 2017 ರಲ್ಲಿ ಪ್ರಕರಣ ದಾಖಲಾ ಗಿತ್ತು, ಪ್ರಕರಣದಲ್ಲಿ ವಾದ ವಿವಾದಗಳನ್ನು ಪರಿಶೀಲಿಸಿ ಆರೋಪಿತ ತಿಮ್ಮಯ್ಯನಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ
2017, ಫೆ.23 ರಂದು ಮದ್ಯಾಹ್ನ 1:30ಕ್ಕೆ
ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ವಿರುದ್ಧ ತುರವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿತನ ವಿರುದ್ದ ಸಿಪಿಐ ರಮೇಶ ರೊಟ್ಟಿ ತನಿಖೆ ದೋಷರೂಪ ಪಟ್ಟಿ ಸಲ್ಲಿಸಿದ್ದರು.
ಮೂರನೇ ಅಧಿಕ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ರಾಯಚೂರು ಪೀಠಾಸನ ನ್ಯಾಯಾಧೀಶರಾದ ಬಿ.ಬಿ ಜಕಾತಿ ಯವರು ಸಾಕ್ಷ್ಯಾಧಾರಗಳನ್ನು ಪರಾಮರ್ಶಿಸಿ
ಆರೋಪಿತನು ಅಪರಾಧ ಎಸಗಿದ್ದಾನೆಂದು ಪರಿಗಣಿಸಿ ಆರೋಪಿತನಿಗೆ ಹತ್ತು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದು ಇರುತ್ತದೆ.ಸರ್ಕಾರದ ಪರವಾಗಿ ಆರ್.ಎ ಗಡಕರಿ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿರುತ್ತಾರೆ. ಹಾಗೂ ಪಿ.ಸಿ ಪಂಪಾಪತಿ ನ್ಯಾಯಾಲಯಕ್ಕೆ ಸಾಕ್ಷಿ ದಾರ ರನ್ನು ಹಾಜರುಪಡಿಸಿರುತ್ತಾರೆಂದು ತಿಳಿಸಿದರು.